ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡರ ಕೊನೆ ಭಾಷಣ:ವಿಡಿಯೋ - ಎಸ್.ಎಲ್.ಧರ್ಮೇಗೌಡ ಅವರ ಕೊನೆಯ ಭಾಷಣ
🎬 Watch Now: Feature Video
ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡ ಹಿಂದಿನ ದಿನ ಚಿಕ್ಕಮಗಳೂರಿನಲ್ಲಿ ಮೂರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಈ ಕಾರ್ಯ ಕ್ರಮಗಳಿಗೆ ಭಾಗವಹಿಸುವ ಮುನ್ನ ಸರಪನಹಳ್ಳಿಯಲ್ಲಿರುವ ಅವರ ತೋಟದಲ್ಲಿ ಅವರ ಕುಟುಂಬ ಸದಸ್ಯರ ಜೊತೆ ನೂತನ ಮನೆ ಕಟ್ಟಲು ಗುದ್ದಲಿ ಪೂಜೆ ನೆರವೇರಿಸಿದ್ದರು. ಶತಮಾನೋತ್ಸವ ಕ್ರೀಡಾಂಗಣದಲ್ಲಿ ಮಲ್ಟಿ ಜಿಮ್ ಉದ್ಘಾಟನೆ ಮಾಡಿ, ನಂತರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಪಶು ಆಸ್ಪತ್ರೆ ಆವರಣದಲ್ಲಿ ಪಾಲಿ ಕ್ಲಿನಿಕ್ ಸ್ಥಾಪನೆಗೆ ಶಂಕು ಸ್ಥಾಪನೆ ನೆರವೇರಿಸಿದ್ದರು. ಬಳಿಕ ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕುವೆಂಪು ಕಲಾ ಮಂದಿರದಲ್ಲಿ ಆಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದ್ದರು. ಈ ವೇಳೆ, ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಕೊನೆಯ ಭಾಷಣ ಹೀಗಿದೆ.
Last Updated : Dec 30, 2020, 7:34 PM IST