ವಿಡಿಯೋ ವೈರಲ್ ಪ್ರಕರಣ: ಬಿಎಸ್ವೈ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ - CM BSY video Viral Case latest news
🎬 Watch Now: Feature Video
ಕಲಬುರಗಿ: ಸಿಎಂ ಯಡಿಯೂರಪ್ಪ ಅವರದ್ದು ಎನ್ನಲಾದ ವಿಡಿಯೋ ವೈರಲ್ ಹಿನ್ನೆಲೆ ಬಿಎಸ್ವೈ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಹಾಗೂ ಕೇಂದ್ರ ಗೃಹ ಸಚಿವ ಸ್ಥಾನದಿಂದ ಅಮಿತ್ ಶಾ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿದರು. ವಾಮಮಾರ್ಗದಿಂದ ಆಡಳಿತಕ್ಕೆ ಬರುವುದನ್ನು ಬಿಜೆಪಿ ನಿಲ್ಲಿಸಲಿ ಎಂದು ಬಿಎಸ್ವೈ ಹಾಗೂ ಶಾ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.