ಸಮರ್ಪಕ ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ - Villagers protest to provide water
🎬 Watch Now: Feature Video
ಕೊಪ್ಪಳ: ಕುಡಿಯುವ ನೀರಿಗಾಗಿ ಆಗ್ರಹಿಸಿ ಗ್ರಾಮ ಪಂಚಾಯತ್ ಸದಸ್ಯರ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ತಾಲೂಕಿನ ಬಹದ್ದೂರಬಂಡಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ನೀರಿಗಾಗಿ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಮೂಲಭೂತ ಅವಶ್ಯಕತೆಗಳಲ್ಲಿ ಒಂದಾಗಿರುವ ಕುಡಿಯುವ ನೀರನ್ನು ಗ್ರಾಮ ಪಂಚಾಯಿತಿ ಸಮರ್ಪಕವಾಗಿ ಒದಗಿಸುತ್ತಿಲ್ಲ ಎಂದು ನೀರಿಗಾಗಿ ಗ್ರಾಮದ ಜನರು ಪರದಾಡುತ್ತಿದ್ದರೂ ಗ್ರಾಮ ಪಂಚಾಯತಿ ಮಾತ್ರ ಕ್ಯಾರೆ ಎನ್ನುತ್ತಿಲ್ಲ ಎಂದು ಗ್ರಾಮಸ್ಥರು ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.