ನಾಳೆ ಬಿಜೆಪಿಯಿಂದ 'ಕರ್ನಾಟಕ ಜನಸಂವಾದ': ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭಾಷಣ - ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ
🎬 Watch Now: Feature Video
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನಾಳೆ ಸಂಜೆ 6 ಗಂಟೆಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. 'ಕರ್ನಾಟಕ ಜನಸಂವಾದ' ಎಂಬ ಹೆಸರಿನ ಮೂಲಕ ರಾಜ್ಯದ ಜನತೆ ಹಾಗೂ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಈ ರ‍್ಯಾಲಿಯಲ್ಲಿ ಭಾಗವಹಿಸಲಿದ್ದು, ಎಲ್ಲರೂ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.