ಅಮೂಲ್ಯ ಹಿಂದಿರುವ ಶಕ್ತಿಗಳ ವಿರುದ್ಧ ಎನ್‌ಐಎ ತನಿಖೆಗೆ ವಿಹೆಚ್ಪಿ, ಬಜರಂಗದಳ ಆಗ್ರಹ - ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಬಂಧನ
🎬 Watch Now: Feature Video
ಮಂಗಳೂರು: ಬೆಂಗಳೂರಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಸಮಾವೇಶದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ಅಮೂಲ್ಯ ಹಿಂದಿರುವ ಶಕ್ತಿಗಳ ಬಗ್ಗೆ ಎನ್‌ಐಎ ತನಿಖೆಯಾಗಲಿ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ. ಇದರ ಹಿಂದೆ ಭಯೋತ್ಪಾದಕರ ಕೈವಾಡವಿರುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತಪಡಿಸಿದ ಅವರು, ಕೂಡಲೇ ತನಿಖೆಯಾಗಲಿ ಎಂದು ಆಗ್ರಹಿಸಿದರು.