ಪ್ಲಾಸ್ಟಿಕ್ ನಿಷೇಧಕ್ಕೆ ಗ್ರಾಮ ಪಂಚಾಯತ್ ಪಣ... ಪೇಪರ್, ಬಟ್ಟೆ ಬ್ಯಾಗ್ ಬಳಕೆಗೆ ಒತ್ತು
🎬 Watch Now: Feature Video
ಬೆಂಗಳೂರು: ರಾಜ್ಯಾದ್ಯಂತ ಪ್ಲಾಸ್ಟಿಕ್ ಬಳಕೆ ನಿಷೇಧವಾಗಿದ್ದರೂ ಅದರ ಬಳಕೆ ಇನ್ನೂ ಕಡಿಮೆಯಾಗಿಲ್ಲ. ಇಂದು ಎಲ್ಲೆಂದರಲ್ಲಿ ಮನುಷ್ಯ ಹಾಗೂ ಪ್ರಾಣಿ ಪಕ್ಷಿಗಳ ಜೀವಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಹಾವಳಿ ಹೆಚ್ಚಾಗಿದೆ. ಇದನ್ನು ನಿಷೇಧಿಸುವಲ್ಲಿ ಬಿಬಿಎಂಪಿ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧಕ್ಕೆ ಇಲ್ಲೊಂದು ಗ್ರಾಮ ಪಂಚಾಯತ್ ಪಣ ತೊಟ್ಟಿದೆ. ಅಂಗಡಿ, ಹೋಟೆಲ್ ಮಾಲೀಕರು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ.