ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ: ರಾಯಚೂರು ಜಿಲ್ಲೆಯಲ್ಲಿ ಪ್ರವಾಹ ಭೀತಿ..! - ಕೃಷ್ಣಾ ನದಿಗೆ ನೀರು ಬಿಡುಗಡೆ
🎬 Watch Now: Feature Video

ರಾಯಚೂರು: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ದೇವದುರ್ಗ ತಾಲೂಕಿನ ಹೂವಿನಹೆಡಗಿ ಬಿಡ್ಜ್‌ಗೆ ನೀರು ಸಮೀಪಿಸುತ್ತಿವೆ. ಹಾಗೂ ರಾಯಚೂರು ತಾಲೂಕಿನ ಗುರ್ಜಾಪುರ ಬ್ರೀಡ್ಜ್ ಕಂ ಬ್ಯಾರೇಜ್ ಭರ್ತಿಯಾಗಿ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಬಿಡ್ಜ್ ಮುಳುಗಡೆ ಹಂತಕ್ಕೆ ತಲುಪಿದೆ.