ಹುಬ್ಬಳ್ಳಿ: ವೀಕೆಂಡ್ ಕರ್ಫ್ಯೂ ಜಾರಿ, ಸಂಕಷ್ಟಕ್ಕೆ ಸಿಲುಕಿದ ವ್ಯಾಪಾರಸ್ಥರು - Weekend Curfew Enforced
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-14125133-thumbnail-3x2-bin.jpg)
ಹುಬ್ಬಳ್ಳಿ: ಕೊರೊನಾ ಸೋಂಕು ದಿನದಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು, ನಾಳೆಯಿಂದ ಎರಡು ದಿನಗಳ ಕಾಲ ಸಂಪೂರ್ಣವಾಗಿ ಎಲ್ಲಾ ಚಟುವಟಿಕೆಗಳು ಬಂದ್ ಆಗಲಿವೆ. ಇದರಿಂದ ಬೀದಿ ಬದಿ ವ್ಯಾಪಾರಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊರೊನಾ ಮೊದಲನೇ ಅಲೆ ಮತ್ತು ಎರಡನೇ ಅಲೆ ಹೊಡೆತಕ್ಕೆ ಎಲ್ಲಾ ವ್ಯಾಪಾರ ವಹಿವಾಟು ಸ್ಥಗಿತಗೊಂಡಿತ್ತು. ಇದೀಗ ವ್ಯಾಪಾರದಲ್ಲಿ ಚೇತರಿಕೆ ಕಾಣುತ್ತಿರುವ ಹೊತ್ತಲ್ಲೇ ಮೂರನೇ ಅಲೆ ಭೀತಿ ಕಾರಣಕ್ಕೆ ಸರ್ಕಾರ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಿದೆ. ಇದರಿಂದ ಪ್ರತಿದಿನ ದುಡಿದು ತಿನ್ನುವ ಬೀದಿ ಬದಿ ವ್ಯಾಪಾರಸ್ಥರಲ್ಲಿ ಆತಂಕ ಎದುರಾಗಿದೆ. ಕರ್ಫ್ಯೂ ಜಾರಿ ಬಗ್ಗೆ ವ್ಯಾಪಾರಸ್ಥರ ಅಭಿಪ್ರಾಯ ಹೀಗಿದೆ.