ವೀಕೆಂಡ್ ಕರ್ಪ್ಯೂಗೆ ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ.. ನಗರದಲ್ಲಿ ಬಂದ್ ವಾತಾವರಣ - ಕೋವಿಡ್ -19
🎬 Watch Now: Feature Video
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ವೀಕೆಂಡ್ ಕರ್ಫ್ಯೂಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜಿಲ್ಲಾದ್ಯಂತ ಬಂದ್ ವಾತಾವರಣ ನಿರ್ಮಾಣವಾಗಿದೆ. ಮಂಗಳೂರು ನಗರದಲ್ಲಿ ಅಲ್ಲಲ್ಲಿ ರಸ್ತೆಗೆ ಬ್ಯಾರಿಕೇಡ್ ಅಳವಡಿಸಲಾಗಿದ್ದು, ವಾಹನಗಳನ್ನು ತಪಾಸಣೆ ನಡೆಸಿ ಬಿಡಲಾಗುತ್ತಿದೆ. ಅನಗತ್ಯವಾಗಿ ತಿರುಗಾಡುವವರನ್ನು ವಾಪಸ್ ಮನೆಗೆ ಕಳುಹಿಸಲಾಗುತ್ತಿದೆ. ಕೆಲ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ಗಳು ಸಂಚರಿಸುತ್ತಿವೆ. ಬೆಳಗ್ಗೆ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗಿತ್ತು. ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಬಂದೋಬಸ್ತ್ ಪರಿಶೀಲನೆ ನಡೆಸಿದರು.