ನೂತನ ಸಚಿವ ಅಂಗಾರರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ - Mangalore Latest News
🎬 Watch Now: Feature Video
ಮಂಗಳೂರು: ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಸಚಿವ ಎಸ್.ಅಂಗಾರ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ ಅವರು ಸ್ವಾಗತಿಸಿದರು. ನೂತನ ಸಚಿವರು ವಿಮಾನ ನಿಲ್ದಾಣದಿಂದ ಹೊರ ಬರುತ್ತಿದ್ದಂತೆ ಹೂವಿನ ಹಾರ ಹಾಕಲು ಬಿಜೆಪಿ ಮುಖಂಡರುಗಳು, ಕಾರ್ಯಕರ್ತರು ಮುಗಿಬಿದ್ದರು. ನೂತನ ಸಚಿವ ಅಂಗಾರ ಅವರೊಂದಿಗೆ ಶಾಸಕರುಗಳಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಸಂಜೀವ ಮಠಂದೂರು ಇದ್ದರು.