ಹಳೆಕೆರೆ ಗ್ರಾಮದಲ್ಲಿ ಒಂಟಿ ಸಲಗ ಪತ್ತೆ; ಕಾಡಾನೆ ಹಾವಳಿಗೆ ತುಮಕೂರಿಗರು ಹೈರಾಣ - Wild Elephant Found in Sakleshpur
🎬 Watch Now: Feature Video
ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಲೇ ಇದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ಇದೀಗ ಸಕಲೇಶಪುರ ತಾಲೂಕಿನ ಹಳೆಕೆರೆ ಗ್ರಾಮದಲ್ಲಿ ಒಂಟಿ ಸಲಗವೊಂದು ರಾಜಾರೋಷವಾಗಿ ಓಡಾಡುತ್ತಿದ್ದು, ಗ್ರಾಮಸ್ಥರನ್ನ ಭಯಭೀತರನ್ನಾಗಿಸಿದೆ. ಮೊನ್ನೆಯಷ್ಟೆ ಇದೇ ಆನೆ ಶಿರಾಡಿ ಘಾಟ್ನಲ್ಲಿ ವಾಹನಗಳನ್ನು ಅಡ್ಡಗಟ್ಟಿ ಸ್ಥಳೀಯರು, ವಾಹನ ಸವಾರರಿಗೆ ಆತಂಕ ಸೃಷ್ಟಿಸಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಪುಂಡಾನೆಯನ್ನು ಹಿಡಿದು ಸ್ಥಳಾಂತರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.