ಕೊಡಗು: ಕಾಡಾನೆಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು- ವಿಡಿಯೋ - ಕೊಡಗಿನಲ್ಲಿ ಕಾಡಾನೆ ದಾಳಿಯಿಂದ ಮಹಿಳೆ ಪಾರು,
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7597657-381-7597657-1592030405386.jpg)
ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆಯೊಬ್ಬರು ಪಾರಾದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಳ್ಳಹಳ್ಳ ನಿವಾಸಿ ಉಷಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಫಿ ತೋಟವೊಂದರಲ್ಲಿ ಕೂಲಿ ಕೆಲಸಕ್ಕೆ ಹೋಗಿ ಮನೆಗೆ ವಾಪಸ್ಸಾಗುತ್ತಿದ್ದ ಸಂದರ್ಭ ಒಂಟಿಸಲಗ ವಿರುದ್ಧ ದಿಕ್ಕಿನಿಂದ ಬಂದಿದೆ. ಈ ಸಂದರ್ಭ ಮಹಿಳೆ ದಾರಿಯಿಂದ ಪಕ್ಕಕ್ಕೆ ಸರಿದು ಓಡಿ ಹೋಗಿ ಬಚಾವಾಗಿದ್ದಾರೆ. ಈ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲಲ್ಲಿ ಸೆರೆ ಹಿಡಿದಿದ್ದಾರೆ.