ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರಿಂದ ವಿನೂತನ ಪ್ರತಿಭಟನೆ - Women congress activists protest news
🎬 Watch Now: Feature Video
ಕಲಬುರಗಿ: ಬೆಲೆ ಏರಿಕೆ ಖಂಡಿಸಿ ಕಲಬುರಗಿಯಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ರಸ್ತೆಯಲ್ಲಿ ಅಡುಗೆ ಮಾಡಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಖನೀಜ್ ಫಾತೀಮಾ ಹಾಗೂ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್ ನೇತೃತ್ವದಲ್ಲಿ ನಗರದ ಜಗತ್ ವೃತ್ತದಲ್ಲಿ ರಸ್ತೆ ಮೇಲೆ ರೊಟ್ಟಿ ಮಾಡಿ ಪ್ರತಿಭಟಿಸಿದರು. ಕೇಂದ್ರ ಬಿಜೆಪಿ ಸರ್ಕಾರ ಅಗತ್ಯ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಮೇಲೆ ಬರೆ ಎಳೆಯಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.