ಸಿದ್ದರಾಮಯ್ಯ ಜೊತೆ ಸೆಲ್ಫಿಗೆ ಮುಗಿಬಿದ್ದ ಮಹಿಳಾಮಣಿಗಳು - ಬೆಂಗಳೂರು ಸುದ್ದಿ
🎬 Watch Now: Feature Video
ಬೆಂಗಳೂರು: ಸಿದ್ದರಾಮಯ್ಯ ಹೋದಲ್ಲೆಲ್ಲಾ ಜನಜಾತ್ರೆ. ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಜನ ಮುಗಿಬೀಳ್ತಾರೆ. ಇಂದು ಸಹ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮಹಿಳೆಯರು ಮುಗಿಬಿದ್ದ ಘಟನೆ ನಡೆಯಿತು. ಹೌದು... ನಗರದ ಜಯನಗರದ ಆರ್.ವಿ. ಟೀಚರ್ಸ್ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಜವಾಹರ ಲಾಲ್ ನೆಹರೂ ಜನ್ಮದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಮಹಿಳಾಮಣಿಗಳು ಮುಗಿಬಿದ್ದರು. ಒಂದು ಹಂತದಲ್ಲಿ ಸಿದ್ದರಾಮಯ್ಯ ಅವರು ಬೇಡವೆಂದರೂ ಇದಕ್ಕೆ ಮಹಿಳೆಯರು ಸೊಪ್ಪು ಹಾಕಲಿಲ್ಲ. ಒಬ್ಬರ ನಂತರ ಒಬ್ಬರು ಸೆಲ್ಫಿಗಾಗಿ ಮುಗಿಬಿದ್ದು ಸೆಲ್ಫಿ ತೆಗೆದುಕೊಂಡರು.