ಕೂಲಿ ಹಣ ಪಾವತಿಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ - ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿದ ಕಾರ್ಮಿಕರು
🎬 Watch Now: Feature Video
ಕೊಪ್ಪಳ: ಕೂಲಿ ಹಣ ಪಾವತಿಸುವಂತೆ ಒತ್ತಾಯಿಸಿ ಉದ್ಯೋಗ ಖಾತ್ರಿ ಯೋಜನೆ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ತಾಲೂಕಿನ ಬುದುಗುಂಪ ಹಾಗೂ ಹುಲಗಿ ಗ್ರಾಮದಲ್ಲಿ ಕಾರ್ಮಿಕರು ನಗರದ ತಾಲೂಕು ಪಂಚಾಯತ್ ಮುಂದೆ ಪ್ರತಿಭಟನೆ ನಡೆಸಿ ಗ್ರಾಮ ಪಂಚಾಯತ್ ಪಿಡಿಒ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈಟಿವಿ ಭಾರತನೊಂದಿಗೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಬಸವರಾಜ್, ಸಮರ್ಪಕವಾಗಿ ಕೂಲಿ ಹಣ ಪಾವತಿಸದೆ ಇರುವುದರಿಂದ ಜನರು ಗುಳೆ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಕೂಲಿ ಹಣ ಪಾವತಿಸಿ ಸಮರ್ಪಕ ಕೆಲಸ ನೀಡಬೇಕೆಂದು ಒತ್ತಾಯಿಸಿದರು.