ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಯನ್ನು ಮರಕ್ಕೆ ಕಟ್ಟಿ ಥಳಿಸಿದ ಜನರು - ಸಿಕಾರ್‌ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ
🎬 Watch Now: Feature Video
ರಾಜಸ್ಥಾನದ ಸಿಕಾರ್‌ನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಯುವಕನೋರ್ವನನ್ನು ಮರಕ್ಕೆ ಕಟ್ಟಿ ಬಾಲಕಿಯ ಕುಟುಂಬಸ್ಥರು ಥಳಿಸಿದ್ದಾರೆ. ಘಟನೆಯಿಂದ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ವಿರುದ್ಧ ಬಾಲಕಿ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಯ ತಲೆಗೆ ಗಾಯವಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ತನಿಖೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.