ದೆಹಲಿ ಹಿಂಸಾಚಾರ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ - ಕಲಬುರಗಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ
🎬 Watch Now: Feature Video
ಕಲಬುರಗಿ: ದೆಹಲಿ ಗಲಭೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಶಾಸಕ ಯತ್ನಾಳ್ ಹೇಳಿಕೆ ಖಂಡಿಸಿ ಕಲಬುರಗಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಎಸ್ವಿಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೇರವಣಿಗೆ ನಡೆಸಿದ ಯೂಥ್ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.