ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ತುಮಕೂರು ಜಿ.ಪಂ. ಅಧ್ಯಕ್ಷೆ ಸೂಚನೆ - ಸಾಮಾನ್ಯ ಸಭೆ
🎬 Watch Now: Feature Video

ತುಮಕೂರು ಜಿಲ್ಲೆಯ ಪಾವಗಡ, ಮಧುಗಿರಿ, ಶಿರಾ ತಾಲ್ಲೂಕು ಸೇರಿದಂತೆ ವಿವಿಧ ಕಡೆ ಫ್ಲೋರೈಡ್ ಅಂಶ ಹೆಚ್ಚಾಗಿದೆ. ಜನರ ಆರೋಗ್ಯದ ದೃಷ್ಟಿಯಿಂದ ಕೆಟ್ಟು ಹೋಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿ ಮಾಡುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವಿ ಕುಮಾರ್ ಅವರು ಜಿ.ಪಂ. ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.