ಯಾದಗಿರಿ: ನೆಚ್ಚಿನ ಶಿಕ್ಷಕಿ ವರ್ಗಾವಣೆ.. ತಮ್ಮನ್ನು ಬಿಟ್ಟೋಗದಂತೆ ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿಗಳು - ಶಿಕ್ಷಕಿ ವರ್ಗಾವಣೆಗೆ ಯಾದಗಿರಿಯಲ್ಲಿ ವಿದ್ಯಾರ್ಥಿಗಳು ಅತ್ತಿದ್ದಾರೆ
🎬 Watch Now: Feature Video

ಯಾದಗಿರಿ ಜಿಲ್ಲೆಯ ಬೈರಿಮಡ್ಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸಿದ್ದ ಶಿಕ್ಷಕಿ ವರ್ಗಾವಣೆಯಾಗಿದ್ದರಿಂದ ವಿದ್ಯಾರ್ಥಿಗಳು ಬಿಕ್ಕಿ ಬಿಕ್ಕಿ ಅತ್ತಿರುವ ದೃಶ್ಯ ಕಂಡುಬಂದಿದೆ. ಶಿಕ್ಷಕಿ ಶಾಂತಮ್ಮ ವರ್ಗಾವಣೆಯಾದವರು. ಇವರು ಕೇವಲ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಗ್ರಾಮಸ್ಥರ ಪ್ರೀತಿಗೆ ಪಾತ್ರರಾಗಿದ್ದರು. ಅವರಿಗೆ ವರ್ಗಾವಣೆ ಆದೇಶ ಬಂದಿರುವುದರಿಂದ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ತಮ್ಮನ್ನು ಮತ್ತು ತಮ್ಮ ಶಾಲೆಯನ್ನು ಬಿಟ್ಟು ಹೋಗಬೇಡಿ ಎಂದು ವಿದ್ಯಾರ್ಥಿಗಳು ಗೋಗರೆದಿದ್ದಾರೆ. ಇದು ಶಿಕ್ಷಕಿ ಮತ್ತು ವಿದ್ಯಾರ್ಥಿಗಳ ನಡುವಿನ ಸಂಬಂಧಕ್ಕೆ ಸಾಕ್ಷಿಯಾಗಿದೆ.
Last Updated : Feb 3, 2023, 8:17 PM IST