ಸರ್ಜಿಕಲ್ ದಾಳಿ ಕುರಿತು ಸಾಕ್ಷಿ ಕೊಡಿ : ಕೇಂದ್ರಕ್ಕೆ ಸವಾಲು ಹಾಕಿದ ತೆಲಂಗಾಣ ಸಿಎಂ - ರಾಹುಲ್ ಗಾಂಧಿ
🎬 Watch Now: Feature Video
ತೆಲಂಗಾಣ : ಸರ್ಜಿಕಲ್ ದಾಳಿ ನಡೆಸಿದ್ದಕ್ಕೆ ಪುರಾವೆ ಕೇಳಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಅಸ್ಸೋಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ಹೇಳಿಕೆಯೊಂದನ್ನ ನೀಡಿದ್ದರು. ಈ ಕುರಿತು ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್, ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ನಾಯಕ. ಭಾರತೀಯ ಸೇನೆಯ ಸರ್ಜಿಕಲ್ ಸ್ಟ್ರೈಕ್ ಕುರಿತು ಪ್ರಶ್ನಿಸಿದ್ದಾರೆ. ಇದರಲ್ಲಿ ತಪ್ಪೇನಿದೆ?. ಈಗ ನಾನು ಕೇಳುತ್ತಿದ್ದೇನೆ, ಕೇಂದ್ರ ಸರ್ಕಾರ ಸರ್ಜಿಕಲ್ ಸ್ಟ್ರೈಕ್ ಕುರಿತು ಸಾಕ್ಷಿ ಕೊಡಲಿ ಎಂದು ಸವಾಲು ಹಾಕಿ, ಜಿಜೆಪಿಯವರು ಸುಳ್ಳು ಮಾಹಿತಿಯನ್ನ ನೀಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Last Updated : Feb 3, 2023, 8:11 PM IST