ಅದ್ಧೂರಿಯಾಗಿ ನಡೆದ ತೂಬಗೆರೆ ಲಕ್ಷ್ಮಿ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ - ದೊಡ್ಡಬಳ್ಳಾಪುರ ಲಕ್ಷ್ಮೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ
🎬 Watch Now: Feature Video
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯ ಇತಿಹಾಸ ಪ್ರಸಿದ್ಧ ಪ್ರಸನ್ನ ಲಕ್ಷ್ಮಿ ವೆಂಕಟರಮಣ ಸ್ವಾಮಿಯ ಬ್ರಹ್ಮರಥೋತ್ಸವವು ಅದ್ಧೂರಿಯಾಗಿ ನೆರವೇರಿತು. ಶ್ರೀದೇವಿ ಭೂದೇವಿ ಸಮೇತ ವೆಂಕಟೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಸ್ಥಾನ ಸುತ್ತಲೂ ಪ್ರದಕ್ಷಿಣೆ ಹಾಕಿಸಿ ರಥದಲ್ಲಿ ತಂದು ಕೂರಿಸಲಾಯಿತು. ಜೈಕಾರದೊಂದಿಗೆ ಭಕ್ತರು ಬಾಳೆಹಣ್ಣು, ದವನವನ್ನು ತೇರಿಗೆ ಎಸೆದು ಭಕ್ತಿ ಸಮರ್ಪಿಸಿದರು. ಕಳೆದೆರಡು ವರ್ಷದಿಂದ ಕೋವಿಡ್ ಕಾರಣದಿಂದ ಅತ್ಯಂತ ಸರಳವಾಗಿ ನಡೆದಿತ್ತು. ಆದರೆ, ಈ ಬಾರಿ ಅತ್ಯಂತ ವಿಜೃಂಭಣೆಯಿಂದ ರಥೋತ್ಸವ ನೆರವೇರಿತು.
Last Updated : Feb 3, 2023, 8:20 PM IST