ಮಹಾರಾಷ್ಟ್ರದ ವಘೋಬಾ ಘಾಟ್ ಬಳಿ ಕಂದಕಕ್ಕೆ ಉರುಳಿದ ಬಸ್: 15 ಮಂದಿಗೆ ಗಾಯ - fifteen passengers injured after a bus plunges into a roadside ditch
🎬 Watch Now: Feature Video
ಪಾಲ್ಘರ್(ಮಹಾರಾಷ್ಟ್ರ): ಪಾಲ್ಘರ್‌ನಿಂದ ಔರಂಗಾಬಾದ್‌ಗೆ ತೆರಳುತ್ತಿದ್ದ ಬಸ್ ವಘೋಬಾ ಘಾಟ್ ಬಳಿ ಕಂದಕಕ್ಕೆ ಉರುಳಿದೆ. ಚಾಲಕ ಕುಡಿದ ಅಮಲಿನಲ್ಲಿದ್ದು, ಅತಿವೇಗದಲ್ಲಿ ವಾಹನ ಚಲಾಯಿಸುತ್ತಿದ್ದ. ಹೀಗಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗ್ತಿದೆ. ಅಪಘಾತದಲ್ಲಿ ಸುಮಾರು 15 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರ ಪೊಲೀಸರು ಮತ್ತು ಸ್ಥಳೀಯ ಆಡಳಿತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಎಲ್ಲಾ ಗಾಯಾಳುಗಳನ್ನು ಪಾಲ್ಘರ್‌ನ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಲಾಗಿದೆ.