ಆಟವಾಡುತ್ತಿದ್ದಾಗ ಚರಂಡಿಗೆ ಬಿದ್ದ ಬಾಲಕಿ: ಎರಡೂವರೆ ಗಂಟೆ ತಡವಾಗಿ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ - girl swept away in flood
🎬 Watch Now: Feature Video
ಥಾಣೆ (ಮಹಾರಾಷ್ಟ್ರ): ಮನೆಯ ಸಮೀಪದ ಚರಂಡಿಯ ಬಳಿ ಆಟವಾಡುತ್ತಿದ್ದಾಗ ಐದು ವರ್ಷದ ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿಕೊಂಡ ಹೋದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದ ಅಜ್ಮಿನಗರದಲ್ಲಿ ಇಂದು ಸಂಜೆ ನಡೆದಿದೆ. ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಗುಲ್ನಾಜ್ ಅನ್ಸಾರಿ ಎಂಬ ಬಾಲಕಿ ಆಡವಾಡುತ್ತಿದ್ದಾಗ ಚರಂಡಿಗೆ ಬಿದ್ದು ಕೊಚ್ಚಿ ಹೋಗಿದ್ದಾರೆ. ಇದನ್ನು ನೋಡಿದ ಆಕೆಯ ಜೊತೆಗಿದ್ದ ಸ್ನೇಹಿತೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಈ ತಿಳಿದ ಬಳಿಕ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ. ಆದರೆ, ಘಟನೆಯ ಬಗ್ಗೆ ಮಾಹಿತಿ ನೀಡಿದರೂ ಅಗ್ನಿಶಾಮಕ ದಳವು ಸುಮಾರು ಎರಡೂವರೆ ಗಂಟೆಗಳ ತಡವಾಗಿ ಸ್ಥಳಕ್ಕೆ ತಲುಪಿದೆ. ನಂತರ ಬಾಲಕಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಅಷ್ಟರಲ್ಲಾಗಲೇ ಕತ್ತಲು ಆವರಿಸಿದ್ದರಿಂದ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದೆ. ಈ ಘಟನೆ ಬಗ್ಗೆ ಭೋಯಿವಾಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.