ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಹೊತ್ತಿ ಉರಿದ ಕಾರು - A car got fire on charmadighat road
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-15800922-thumbnail-3x2-car.jpg)
ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನಲ್ಲಿ ನಡೆದಿದೆ. ಸೋಮವಾರ ರಾತ್ರಿ ಮಂಗಳೂರಿನ ಜೋಕಟ್ಟೆಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಅಣ್ಣಪ್ಪಸ್ವಾಮಿ ದೇವಸ್ಥಾನ ಬಳಿ ಈ ಅವಘಡ ಸಂಭವಿಸಿದೆ. ಕಾರಿನ ಡೀಸೆಲ್ ಟ್ಯಾಂಕ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರನ್ನು ಸೈಡ್ ಹಾಕಿ ಅದರಲ್ಲಿದ್ದ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಚಾರ್ಮಾಡಿ ಸಮಾಜ ಸೇವಕ ಹಸೆನಬ್ಬ ಅವರಿಗೆ ವಿಷಯ ತಿಳಿಸಿದರು. ಹಸೆನಬ್ಬ ಅವರು ಬಣಕಲ್ ಠಾಣೆಗೆ ವಿಷಯ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ, ಬೆಂಕಿಯನ್ನು ನಂದಿಸಿದರು. ಅಷ್ಟರಲ್ಲಿ ಕಾರು ಸುಟ್ಟು ಕರಕಲಾಗಿತ್ತು.