ದಕ್ಷಿಣ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ ಎರಡು ಬೋಗಿಗಳು - ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿರುವ ಸಾಧ್ಯತೆ
🎬 Watch Now: Feature Video
ಹೈದರಾಬಾದ್: ಸಿಕಂದರಾಬಾದ್‌ನಿಂದ ದೆಹಲಿಗೆ ತೆರಳುತ್ತಿದ್ದ ದಕ್ಷಿಣ ಎಕ್ಸ್‌ಪ್ರೆಸ್ ರೈಲಿನ ಕೊನೆಯ ಕ್ಯಾರೇಜ್‌ನಲ್ಲಿ (ಬೋಗಿ) ಬೆಂಕಿ ಕಾಣಿಸಿಕೊಂಡಿದೆ. ಭುವನಗಿರಿ ಸಮೀಪದ ಪಗಿಡಿಪಲ್ಲಿಯಲ್ಲಿ ಶನಿವಾರ ಮಧ್ಯರಾತ್ರಿ 1 ಗಂಟೆಗೆ ಈ ಘಟನೆ ಸಂಭವಿಸಿದೆ. ಇದು ಲಗೇಜ್ ಬೋಗಿ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸಿವೆ. ಈ ಬಗ್ಗೆ ರೈಲ್ವೆ ಅಧಿಕಾರಿ ಅಭಯ್ ಕುಮಾರ್ ಗುಪ್ತಾ ಮಾಧ್ಯಮಗಳೊಂದಿಗೆ ಮಾತನಾಡಿ, ಈ ಘಟನೆ ಕುರಿತು ತನಿಖೆ ಆರಂಭಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದರು. ಎರಡು ಪಾರ್ಸೆಲ್ ಬೋಗಿಗಳು ಭಾಗಶಃ ಸುಟ್ಟು ಕರಕಲಾಗಿದೆ ಎಂದು ಹೇಳಲಾಗಿದೆ.