ಸಿದ್ದರಾಮಯ್ಯ ಅಮೃತ ಮಹೋತ್ಸವ: ಮಾಜಿ ಸಚಿವೆ ಉಮಾಶ್ರೀ ಹೇಳಿದ್ದೇನು? - ಕ್ರಾಮಕ್ರಮದ ಸಿದ್ಧತೆ ಕುರಿತು ಮಾತನಾಡಿದ ಮಾಜಿ ಸಚಿವೆ ಉಮಾಶ್ರೀ
🎬 Watch Now: Feature Video
ದಾವಣಗೆರೆ: ಆಗಸ್ಟ್ 03ರಂದು(ನಾಳೆ) ದಾವಣಗೆರೆಯ ಶಾಮನೂರು ಅರಮನೆ ಮೈದಾನದಲ್ಲಿ ಜರುಗುವ ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಸಕಲ ಸಿದ್ಧತೆ ನಡೆದಿದೆ. ಊಟದ ಹಾಲ್, ಮಾಜಿ ಮತ್ತು ಹಾಲಿ ಶಾಸಕರಿಗೆ ಕೂರಲು ಆಸನದ ವ್ಯವಸ್ಥೆ, ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ ಮಾಡಲಾಗಿದೆ. ಜನ ಪ್ರತಿನಿಧಿಗಳಿಗೆ ಪ್ರತ್ಯೇಕ ಊಟದ ವ್ಯವಸ್ಥೆಯಾಗಿದೆ. ರಾಜ್ಯದ ಹಲವೆಡೆಯಿಂದ 5 ರಿಂದ 10 ಲಕ್ಷ ಜನ ಸೇರುವ ಸಾಧ್ಯತೆ ಇದೆ. ಈ ಕುರಿತು ಮಾಜಿ ಸಚಿವೆ ಉಮಾಶ್ರೀ ಅವರನ್ನು ನಮ್ಮ ಪ್ರತಿನಿಧಿ ಮಾತನಾಡಿಸಿದರು.