ಮಳೆರಾಯನ ಅಬ್ಬರದ ನಡುವೆಯೂ ಆಶಾ ಕಾರ್ಯಕರ್ತರ ಪ್ರತಿಭಟನೆ; ಕೈಯಲ್ಲಿ ಛತ್ರಿಹಿಡಿದು ಸರ್ಕಾರ ವಿರುದ್ಧ ಘೋಷಣೆ.. - ಮಳೆಯಲ್ಲೇ ಪ್ರತಿಭಟನೆ ಮುಂದುವರೆಸಿದ ಆಶಾ ಕಾರ್ಯಕರ್ತೆಯರು
🎬 Watch Now: Feature Video
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತರು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಳೆ ಬಂದರೂ ವಿಚಲಿತರಾಗದೇ ಕೈಯಲ್ಲಿ ಛತ್ರಿ ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿರುವ ಇವರು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.