ಕುಟುಂಬಸ್ಥರೊಂದಿಗೆ ಸರಳವಾಗಿ ಬಸವ ಜಯಂತಿ ಆಚರಿಸಿದ ಸಿಎಂ ಬಿಎಸ್ವೈ - ಜಗಜ್ಯೋತಿ ಬಸವೇಶ್ವರ ಜಯಂತಿ
🎬 Watch Now: Feature Video

ಬೆಂಗಳೂರು: ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಕುಟುಂಬಸ್ಥರೊಂದಿಗೆ ಸರಳವಾಗಿ ಆಚರಿಸಿದರು. ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ವೇಳೆ ಸಿಎಂ ಬಿಎಸ್ವೈಗೆ ಪುತ್ರ ಬಿ.ವೈ. ವಿಜಯೇಂದ್ರ ಹಾಗೂ ಕುಟುಂಬಸ್ಥರು ಸಾಥ್ ನೀಡಿದರು. ಡಿಸಿಎಂ ಗೋವಿಂದ ಕಾರಜೋಳ ಕೂಡ ಉಪಸ್ಥಿತರಿದ್ದರು.