ಟೋಲ್ ಬೂತ್ನಲ್ಲಿ ಮಹಿಳೆಗೆ ಡಿಕ್ಕಿ ಹೊಡೆದ ಬೈಕ್.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ - ಮಹಿಳೆಗೆ ಡಿಕ್ಕಿ ಹೊಡೆದ ಬೈಕ್
🎬 Watch Now: Feature Video
ಡೆಹ್ರಾಡೂನ್: ವೇಗವಾಗಿ ಬಂದ ಬೈಕ್ವೊಂದು ಮಹಿಳೆಗೆ ಡಿಕ್ಕಿ ಹೊಡೆದಿರುವ ಘಟನೆ ಡೆಹ್ರಾಡೂನ್ನಲ್ಲಿ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಟೋಲ್ ಬೂತ್ವೊಂದರಲ್ಲಿ ಕೆಲಸ ಮಾಡ್ತಿದ್ದ ಯುವತಿಗೆ ಅದು ಡಿಕ್ಕಿ ಹೊಡೆದಿರುವ ಪರಿಣಾಮ ಮಹಿಳೆ ಸುಮಾರು 50 ಮೀಟರ್ ದೂರು ಬಿದ್ದಿದ್ದಾರೆ. ಗಾಯಗೊಂಡಿರುವ ಮಹಿಳೆಯನ್ನ ಹಿಮಾಲಯನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಮಹಿಳೆಯ ಬಲಗಾಲಿನ ಮೂರು ಮೂಳೆ ಮುರಿದಿದ್ದು, ತಲೆಗೆ ಗಂಭೀರವಾದ ಗಾಯವಾಗಿದೆ.