ಬೈಕ್ ಸವಾರನ ಮೇಲೆ ಹರಿದ ಕ್ಯಾಂಟರ್.. ರಸ್ತೆ ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆ - ಈಟಿವಿ ಭಾರತ ಕರ್ನಾಟಕ
🎬 Watch Now: Feature Video
ರುದ್ರಪುರ(ಉತ್ತರಾಖಂಡ): ನಿಯಂತ್ರಣ ಕಳೆದಕೊಂಡ ಕ್ಯಾಂಟರ್ವೊಂದು ಬೈಕ್ ಸವಾರನ ಮೇಲೆ ಹರಿದು ಹೋಗಿರುವ ಘಟನೆ ಉತ್ತರಾಖಂಡದ ರುದ್ರಪುರದ ಕೊಟ್ವಾಲಿ ಪ್ರದೇಶದಲ್ಲಿ ನಡೆದಿದೆ. ಘಟನೆಯ ಭಯಾನಕ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಘಟನೆಯಿಂದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಬ್ಯಾಂಕ್ವೊಂದರಲ್ಲಿ ಕೆಲಸ ಮಾಡ್ತಿದ್ದ ದೇವಿದಾಸ್ ಸಂಜೆ ಮನೆಗೆ ತೆರಳುತ್ತಿದ್ದನು. ಈ ವೇಳೆ ಟ್ಯಾಂಕರ್ವೊಂದು ಬೈಕ್ಗೆ ಡಿಕ್ಕಿ ಹೊಡೆದಿದ್ದು, ಆತನ ಮೇಲೆ ಹರಿದು ಹೋಗಿದೆ. ಘಟನಾ ಸ್ಥಳಕ್ಕಾಗಮಿಸಿರುವ ಪೊಲೀಸರು ಮೃತದೇಹ ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.