ಭಾರತ್ ಬಂದ್ಗೆ ಬೀದರ್ನಲ್ಲಿ ಹೇಗಿದೆ ಪ್ರತಿಕ್ರಿಯೆ? - ತೆಲಂಗಣದ ಹೈದ್ರಾಬಾದ್ ಹಾಗೂ ಮಹಾರಾಷ್ಟ್ರದ ಸೊಲ್ಲಾಪುರ ಮಾರ್ಗದಲ್ಲಿ ಸಾರಿಗೆ ಸಂಸ್ಥೆ ಬಸ್ ಗಳ ಓಡಾಟ ಸ್ಥಬ್ದ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5634985-thumbnail-3x2-sidu---copy.jpg)
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್ಗೆ ಗಡಿ ಜಿಲ್ಲೆ ಬೀದರ್ನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾರಿಗೆ ಸಂಚಾರ, ಜನಜೀವನ, ವ್ಯಾಪಾರ ವಹಿವಾಟು ಎಂದಿನಂತಿದೆ. ಅಂತರ್ ರಾಜ್ಯ ಸಾರಿಗೆಯಲ್ಲಿ ಸ್ಚಲ್ಪ ವ್ಯತ್ಯಯ ಕಂಡು ಬಂದಿದ್ದು ತೆಲಂಗಾಣದ ಹೈದರಾಬಾದ್ ಹಾಗೂ ಮಹಾರಾಷ್ಟ್ರದ ಸೊಲ್ಲಾಪುರ ಮಾರ್ಗದಲ್ಲಿ ಸಾರಿಗೆ ಸಂಸ್ಥೆ ಬಸ್ಗಳ ಓಡಾಟ ಸ್ಥಬ್ಧವಾಗಿದೆ. ಶಾಲಾ ಕಾಲೇಜುಗಳು ಎಂದಿನಂತೆ ತೆರೆದಿದ್ದು, ವಿದ್ಯಾರ್ಥಿಗಳು ಶಾಲೆಗೆ ಹೊರಟಿದ್ದಾರೆ. ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಬೀಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.