ಚಾಲಕನ ಅಜಾಗರೂಕತೆಯಿಂದ ಟೋಲ್ಗೆ ಅಪ್ಪಳಿಸಿದ ಬಸ್, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
🎬 Watch Now: Feature Video
ದಾವಣಗೆರೆ: ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್ ಟೋಲ್ ಗೇಟ್ಗೆ ಡಿಕ್ಕಿ ಹೊಡೆದಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಾನಕಟ್ಟೆ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ರಭಸವಾಗಿ ಬಂದ ಖಾಸಗಿ ಬಸ್ ಟೋಲ್ನಲ್ಲಿ ಹಣ ಕಟ್ಟಿಸಿಕೊಳ್ಳುವ ಕೊಠಡಿಗೆ ಬಂದು ಡಿಕ್ಕಿ ಹೊಡೆದ ಪರಿಣಾಮ ಬಸ್ನ ಮುಂಭಾಗದ ಗಾಜು ಚೂರು ಚೂರಾಗಿದೆ. ಇನ್ನು ಈ ಭೀಕರ ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಟೋಲ್ನಲ್ಲಿ ಹಣ ಕಟ್ಟಿಸಿಕೊಳ್ಳುವ ಸಿಬ್ಬಂದಿ ಕೂಡ ಭಯದಿಂದ ಹಾರಿ ಬಿದ್ದಿರುವ ದೃಶ್ಯ ಕೂಡ ಸಿಸಿಟಿವಿಯಲ್ಲಿ ಸೆರೆಯಾಗಿದೆ.