ಬಳ್ಳಾರಿ: ಜಮೀನಿಗೆ ಉರುಳಿದ ಬಸ್; ಹಲವು ಪ್ರಯಾಣಿಕರಿಗೆ ಗಾಯ - ಬಳ್ಳಾರಿಯಲ್ಲಿ ಬಸ್​ ಅಪಘಾತ

🎬 Watch Now: Feature Video

thumbnail

By

Published : Aug 5, 2022, 5:47 PM IST

ಸಾರಿಗೆ ಸಂಸ್ಥೆಯ ಬಸ್​ ರಸ್ತೆ ಬಳಿಯ ಜಮೀನಿಗೆ ಉರುಳಿಬಿದ್ದು 5ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಬಳಿ ನಡೆಯಿತು. ಸಿರುಗುಪ್ಪದಿಂದ ಬಳ್ಳಾರಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡು ಜಮೀನಿಗೆ ಉರುಳಿದೆ. ಬಸ್​ನಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಸಿರುಗುಪ್ಪ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ತೆಕ್ಕಲಕೋಟೆ ಠಾಣೆಯ ಪೊಲೀಸರು, ಸಿರುಗುಪ್ಪ ಡಿಪೋ ವ್ಯವಸ್ಥಾಪಕ ತಿರುಮಲೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.