ಬೆಳ್ಳಂಬೆಳಗ್ಗೆ ಮಥುರಾದಲ್ಲಿ ರಾಧೆ-ಕೃಷ್ಣನ ಪೂಜೆ ಮಾಡಿದ ಸಿಎಂ ಯೋಗಿ ಆದಿತ್ಯನಾಥ್ - ಕೃಷ್ಣನ ದೇವಸ್ಥಾನಕ್ಕೆ ಯೋಗಿ ಭೇಟಿ
🎬 Watch Now: Feature Video
ಮಥುರಾ(ಉತ್ತರ ಪ್ರದೇಶ): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಬೆಳ್ಳಂಬೆಳಗ್ಗೆ ಶ್ರೀಕೃಷ್ಣನ ಜನ್ಮಸ್ಥಾನ ಮಥುರಾದ ದೇವಸ್ಥಾನಕ್ಕೆ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು. ರಾಧೆ-ಕೃಷ್ಣನ ಮೂರ್ತಿಗೆ ಆರತಿ ನೆರವೇರಿಸಿದ ಯೋಗಿ, ಗರ್ಭಗುಡಿಯಲ್ಲಿ ಪೂಜೆ ನೆರವೇರಿಸಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಥುರಾ ಪ್ರವಾಸದಲ್ಲಿದ್ದಾರೆ. ಈ ವೇಳೆ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆಯಲ್ಲಿ ಭಾಗಿಯಾದರು.