ಗಣೇಶ ನಿಮಜ್ಜನದ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ - ETV Bharat Kannada
🎬 Watch Now: Feature Video
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ದಢೇಸೂಗೂರು ಗ್ರಾಮದಲ್ಲಿ ನಿನ್ನೆ ರಾತ್ರಿ ಗಣೇಶ ನಿಮಜ್ಜನ ವೇಳೆ ಎರಡು ಗುಂಪುಗಳ ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ. ಇದು ವಿಕೋಪಕ್ಕೆ ತಿರುಗಿಪರಸ್ಪರ ಎರಡು ಗುಂಪಿನ ಯುವಕರು ಕೈ ಕೈ ಮಿಲಾಯಿಸಿದ್ದಾರೆ. ಘಟನೆಯಲ್ಲಿ ಮೂರ್ನಾಲ್ಕು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಭದ್ರತೆ ಒದಗಿಸಿ ಡಿಎಆರ್ ತುಕಡಿ ನಿಯೋಜನೆ ಮಾಡಲಾಗಿದೆ.
Last Updated : Sep 9, 2022, 4:19 PM IST