ಬಿಜೆಪಿ ವಿರುದ್ಧ ತಿರುಗಿಬಿದ್ದ ಕೈ ನಾಯಕರು,ರಸ್ತೆಗಿಳಿದು ಪ್ರತಿಭಟನೆ - kannadanews
🎬 Watch Now: Feature Video
ರಾಜ್ಯದಲ್ಲಿ ಮೈತ್ರಿ ಸರ್ಕಾರದ ಸ್ಥಿತಿ ಅಲ್ಲೋಲ ಕಲ್ಲೋಲವಾಗಿದೆ. ಸರ್ಕಾರ ಉಳಿಸಿಕೊಳ್ಳುವ ಎಲ್ಲ ಪ್ರಯತ್ನಗಳು ವಿಫಲವಾಗುತ್ತಿದ್ದು, ರೊಚ್ಚಿಗೆದ್ದ ನಾಯಕರು ರಸ್ತೆಗಿಳಿದು ಬಿಜೆಪಿ ವಿರುದ್ಧ ಪ್ರತಿಭಟಿಸಿದ್ದಾರೆ. ಎಲ್ಲದಕ್ಕೂ ಬಿಜೆಪಿಯೇ ಕಾರಣ ಎಂದು ಆರೋಪಿಸಿದ್ದಾರೆ.ಒಂದು ಕಡೆ ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ಪಕ್ಷಗಳು ಇನ್ನಿಲ್ಲದ ಸರ್ಕಸ್ ಮಾಡುತ್ತಿದ್ದರೆ, ಮತ್ತೊಂದೆಡೆ ಸರ್ಕಾರ ರಚಿಸಲು ಬಿಜೆಪಿ ರೂಪುರೇಷೆಗಳನ್ನ ಸಿದ್ದಪಡಿಸುತ್ತಿದೆ. ಈ ಎಲ್ಲಾ ರಾಜಕೀಯ ಬೆಳವಣಿಗೆಗಳಿಂದ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ರಾಜಕೀಯ ನಾಟಕಕ್ಕೆ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.