ಕೊಪ್ಪಳದ ಜಿಲ್ಲಾಸ್ಪತ್ರೆ ಐಸೋಲೇಷನ್ ವಾರ್ಡ್ನಿಂದ ವ್ಯಕ್ತಿ ಪರಾರಿ! - ಕೊಪ್ಪಳದಲ್ಲಿ ಕೊರೊನಾ ಶಂಕಿತ ವ್ಯಕ್ತಿ ಪರಾರಿ
🎬 Watch Now: Feature Video
ಕೊಪ್ಪಳ: ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿ ದಾಖಲಾಗಿದ್ದ ವ್ಯಕ್ತಿ ಡಿಸ್ಚಾರ್ಜ್ ಮಾಡುವ ಮುನ್ನವೇ ಎಸ್ಕೇಪ್ ಆಗಿದ್ದಾನೆ. ಮಹಾರಾಷ್ಟ್ರ ಮೂಲದ 42 ವರ್ಷದ ವ್ಯಕ್ತಿಯನ್ನು ಕೊರೊನಾ ಸೋಂಕು ತಗುಲಿರುವ ಶಂಕೆಯಿಂದ ಆಸ್ಪತ್ರೆಗೆ ದಾಖಲಿಸಿ, ಮೇ 11ರಂದು ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್ಗೆ ಕಳಿಸಲಾಗಿತ್ತು. ಲ್ಯಾಬ್ ವರದಿ ನೆಗೆಟಿವ್ ಬಂದಿದೆ. ಆದರೆ ಡಿಸ್ಚಾರ್ಜ್ ಮಾಡುವ ಮುನ್ನವೇ ನಿನ್ನೆ ಸಂಜೆ ಆ ವ್ಯಕ್ತಿ ಪರಾರಿಯಾಗಿದ್ದಾನೆ. ಈ ಕುರಿತು ಜಿಲ್ಲಾಸ್ಪತ್ರೆಯ ಪ್ರಕಾಶ್ ಎಂಬುವವರು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
TAGGED:
corona-suspect-escape