ಯೂತ್ ಕಾಂಗ್ರೆಸ್ ಅಧ್ಯಕ್ಷರ ತಲೆಗೂದಲು ಹಿಡಿದು ಎಳೆದಾಡಿದ ಪೊಲೀಸರು.. ವಿಡಿಯೋ - Etv bharat kannada
🎬 Watch Now: Feature Video
ನವದೆಹಲಿ: ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ ನೇತೃತ್ವದಲ್ಲಿ ಕಾರ್ಯಕರ್ತರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಶ್ರೀನಿವಾಸ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ, ಅವರ ತಲೆಗೂದಲು ಹಿಡಿದು ಪೊಲೀಸ್ ಸಿಬ್ಬಂದಿ ಎಳೆದಾಡಿರುವ ಘಟನೆ ನಡೆದಿದೆ. ಇದರ ವಿಡಿಯೋ ವೈರಲ್ ಆಗಿದೆ. ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ದೆಹಲಿ ಪೊಲೀಸ್ ಘಟನೆಯಲ್ಲಿ ಭಾಗಿಯಾಗಿರುವ ಸಿಬ್ಬಂದಿಯನ್ನ ಗುರುತಿಸುವ ಪ್ರಯತ್ನ ನಡೆದಿದ್ದು, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.