ಪ್ರತಿಭಟನೆ ವೇಳೆ ಡಿಕೆ ಸುರೇಶ್​ ತಳ್ಳಿ ವ್ಯಾನ್ ಹತ್ತಿಸಿದ ಪೊಲೀಸರು - ಡಿಕೆ ಸುರೇಶ್ ಬಂಧನ

🎬 Watch Now: Feature Video

thumbnail

By

Published : Jun 14, 2022, 1:43 PM IST

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ಇಡಿ ಸಮನ್ಸ್ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಎಐಸಿಸಿ ಕಚೇರಿ ಮುಂದೆ ಪ್ರತಿಭಟನಾನಿರತ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯದ ದಿನೇಶ್ ಗುಂಡೂರಾವ್, ಸಂಸದ ಡಿ.ಕೆ.ಸುರೇಶ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಈ ವೇಳೆ, ಡಿಕೆ ಸುರೇಶ್ ಮತ್ತು ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ. ಅರೆಸ್ಟ್ ಮಾಡ್ತೀರಾ ಎಂದು ಡಿಕೆ ಸುರೇಶ್ ಕೇಳುತ್ತಿದ್ದಂತೆ ಪೊಲೀಸರು ಅವರನ್ನು ತಳ್ಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.