ಮೈಸೂರು ದಸರಾ: ಅರಮನೆಯೊಳಗೆ ತಾಲೀಮು ನಡೆಸಿದ ಗಜಪಡೆ - ಅರಮನೆಯೊಳಗೆ ತಾಲೀಮು ನಡೆಸಿದ ಗಜಪಡೆ
🎬 Watch Now: Feature Video
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗಳಿಗೆ ಶುಕ್ರವಾರ ಮೊದಲ ಹಂತದ ತಾಲೀಮು ನಡೆಸಲಾಯಿತು. ಅರಮನೆ ಆವರಣದಲ್ಲಿ ಶುಕ್ರವಾರ ಸಂಪ್ರದಾಯದಂತೆ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ಸೇರಿದಂತೆ ಭೀಮ, ಗೋಪಾಲ ಸ್ವಾಮಿ, ಅರ್ಜುನ, ವಿಕ್ರಮ, ಧನಂಜಯ, ಗೋಪಿ, ಕಾವೇರಿ, ಶ್ರೀರಾಮ ಆನೆಗಳಿಗೆ ಪೂಜೆ ಸಲ್ಲಿಸಿ ತಾಲೀಮಿಗೆ ಹಸಿರು ನಿಶಾನೆ ತೋರಲಾಯಿತು. ಅರಮನೆ ಆವರಣದ ಸುತ್ತ ಅಭಿಮನ್ಯು ಮತ್ತು ತಂಡ ಎರಡು ಸುತ್ತಿನ ತಾಲೀಮು ನಡೆಸಿತು.