EXCLUSIVE: ನನ್ನ ವಿರುದ್ಧ ಸ್ಪರ್ಧೆ ಮಾಡಿ, ಉದ್ಧವ್ ಠಾಕ್ರೆಗೆ ನವನೀತ್ ಕೌರ್ ಸವಾಲು - Navneet Rana Exclusive Interview
🎬 Watch Now: Feature Video
ಹನುಮಾನ್ ಚಾಲೀಸಾ ವಿವಾದಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿ ಈಗಾಗಲೇ ಷರತ್ತುಬದ್ಧ ಜಾಮೀನು ಪಡೆದು ಹೊರ ಬಂದಿರುವ ಅಮರಾವತಿ ಸಂಸದೆ ನವನೀತ್ ರಾಣಾ ಕೌರ್ ಈಟಿವಿ ಭಾರತ್ ಜೊತೆ ಮಾತನಾಡಿದರು. ಈ ವೇಳೆ, ಅನೇಕ ಜ್ವಲಂತ ಸಮಸ್ಯೆಗಳ ಬಗ್ಗೆ ಮನದಾಳ ಬಿಚ್ಚಿಟ್ಟಿರುವ ಸಂಸದೆ, ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ತಮ್ಮನ್ನ ಕೆಟ್ಟದಾಗಿ ನಡೆಸಿಕೊಂಡಿದೆ ಎಂದರು. ಮುಂಬರುವ ಚುನಾವಣೆಯಲ್ಲಿ ತಮ್ಮ ವಿರುದ್ಧ ಸ್ಪರ್ಧೆ ಮಾಡುವಂತೆ ಮಹಾರಾಷ್ಟ್ರ ಸಿಎಂಗೆ ಅವರು ಓಪನ್ ಚಾಲೆಂಜ್ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದಿರುವುದು ದುರದೃಷ್ಟಕರ. ನಮ್ಮ ವಿಷಯದಲ್ಲಿ ಅಲ್ಲಿನ ಸರ್ಕಾರ ಸಂಪೂರ್ಣವಾಗಿ ಕಾನೂನು ನಿಯಮ ಮುರಿದಿದೆ ಎಂದರು.