ಮುಳುಗಡೆಯಾದ ನೂರಾರು ಎಕರೆ ಅಡಿಕೆ ತೋಟ .. ಕಣ್ಣೀರು ಹಾಕುತ್ತಿರುವ ರೈತರು - Water seeped into the farm due to heavy rain
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-15822018-thumbnail-3x2-yyy.jpg)
ಚಿಕ್ಕಮಗಳೂರು : ಕಳೆದ ಕೆಲ ದಿನಗಳಿಂದ ಜಿಲ್ಲೆಯ ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ದುಸ್ತರವಾಗಿದೆ. ಆದರೆ ಈಗ ಬಯಲು ಸೀಮೆಯ ಭಾಗದಲ್ಲೂ ಭಾರಿ ಮಳೆಯಾಗುತ್ತಿರುವುದರಿಂದ ಇಲ್ಲಿನ ರೈತರು ಕಣ್ಣೀರು ಹಾಕುತ್ತಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು, ಇಲ್ಲಿನ ನದಿ, ಹಳ್ಳಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯ ಕಡೂರು ತಾಲೂಕಿನ ಪಿಳ್ಳೇನಹಳ್ಳಿ ಗ್ರಾಮದಲ್ಲಿ ಮಳೆ ನೀರು ರೈತರ ಜಮೀನಿಗೆ ನುಗ್ಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಸೇತುವೆಯ ಕಾಮಗಾರಿ ಅಪೂರ್ಣ ಹಿನ್ನೆಲೆ, ಈ ಸಂಕಷ್ಟ ಎದುರಾಗಿದೆ. ಮಳೆ ನೀರಿನಿಂದಾಗಿ ರೈತರ ಜಮೀನುಗಳು ಜಲಾವೃತವಾಗಿವೆ. ಜೊತೆಗೆ ಮಳೆ ನೀರು ಅಡಿಕೆ ತೋಟಗಳಿಗೂ ನುಗ್ಗಿದ್ದು, ಬೆಳೆಹಾನಿ ಆಗಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
TAGGED:
ಚಿಕ್ಕಮಗಳೂರಿನಲ್ಲಿ ಭಾರೀ ಮಳೆ