ನಾಗಪುರದಲ್ಲಿ ಟ್ರಾಫಿಕ್ ಪೊಲೀಸ್ - ಸೆಕ್ಯುರಿಟಿ ಗಾರ್ಡ್ ನಡುವೆ ಫೈಟ್: ವಿಡಿಯೋ - fight between traffic police and security guard in nagpur
🎬 Watch Now: Feature Video
ನಾಗಪುರ(ಮಹಾರಾಷ್ಟ್ರ) : ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಿದ ವಿವಾದದಿಂದಾಗಿ ಹೋಟೆಲ್‌ನ ಸೆಕ್ಯುರಿಟಿ ಗಾರ್ಡ್ ಹಾಗೂ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಕೈ ಕೈ ಮಿಲಾಯಿಸಿರುವ ಘಟನೆ ಸಕರ್ದಾರ್ ಪೊಲೀಸ್ ಠಾಣಾ ವ್ಯಾಪ್ತಿಯ ತಿರಂಗಾ ಚೌಕ್ದಲ್ಲಿ ನಡೆದಿದೆ. ಇಲ್ಲಿನ ತಿರಂಗಾ ಚೌಕ್ ಪ್ರದೇಶದ ಹೋಟೆಲ್‌ನ ಎದುರಿನ ರಸ್ತೆಯಲ್ಲಿ ದ್ವಿಚಕ್ರ ವಾಹನಗಳನ್ನು ನೋಪಾರ್ಕಿಂಗ್ ರಸ್ತೆಯಲ್ಲಿ ನಿಲ್ಲಿಸಲಾಗಿತ್ತು. ಈ ಸಂದರ್ಭ ಸ್ಥಳಕ್ಕಾಗಮಿಸಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ, ಟೋಯಿಂಗ್ ವ್ಯಾನ್ ಸಹಾಯದಿಂದ ವಾಹನವನ್ನು ತೆಗೆದುಕೊಂಡು ಹೋಗಲು ಯತ್ನಿಸಿದ್ದಾರೆ. ಈ ಸಂದರ್ಭ ಅಲ್ಲೇ ಇದ್ದ ಸೆಕ್ಯುರಿಟಿ ಗಾರ್ಡ್ ಇದನ್ನು ವಿರೋಧಿಸಿದ್ದಾರೆ. ಸೆಕ್ಯುರಿಟಿ ಗಾರ್ಡ್ ಮತ್ತು ಪೊಲೀಸ್ ಸಿಬ್ಬಂದಿ ನಡುವೆ ತೀವ್ರ ವಾಗ್ವಾದ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಈ ಬಗ್ಗೆ ಪೊಲೀಸರು ಭದ್ರತಾ ಸಿಬ್ಬಂದಿ ಪೊಲೀಸರ ಕಾರ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ಈ ಘಟನೆಯನ್ನು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.