ಲಖನೌದ ಲೆವಾನ ಹೋಟೆಲ್​ನಲ್ಲಿ ಬೆಂಕಿ ಅವಘಡ.. ನಾಲ್ವರ ಸಾವು - ನವದೆಹಲಿಯ ಚಾಂದಿನಿ ಚೌಕ್ ಬಳಿ ಅಗ್ನಿ ಅವಘಡ

🎬 Watch Now: Feature Video

thumbnail

By

Published : Sep 5, 2022, 8:28 PM IST

ಲಖನೌ (ಉತ್ತರಪ್ರದೇಶ): ಇಲ್ಲಿನ ಹಜರತ್‌ಗಂಜ್ ಮಹಾತ್ಮಾ ಗಾಂಧಿ ರಸ್ತೆಯಲ್ಲಿರುವ ಹೋಟೆಲ್ ಲೆವಾನಾದಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್ ಲೆವಾನಾದ ಮೂರನೇ ಮಹಡಿಯಲ್ಲಿ ಇಂದು ಬೆಳಗ್ಗೆ 8.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು,ತಕ್ಷಣ 15 ಅಗ್ನಿಶಾಮಕ ದಳದ ವಾಹನಗಳು ಆಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡವು. ಬೆಂಕಿ ಅವಘಡದಿಂದಾಗಿ ಸುಮಾರು ನಾಲ್ವರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಮತ್ತೊಂದು ಕಡೆ.. ನವದೆಹಲಿಯ ಚಾಂದಿನಿ ಚೌಕ್ ಬಳಿಯ ಕುಚಾಬಾಗ್​ನ ಬಟ್ಟೆ ಅಂಗಡಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆ ಮೊದಲ ಮಹಡಿಯಿಂದ ನಾಲ್ಕನೇ ಮಹಡಿವರೆಗೆ ಹರಡಿದೆ. ಸ್ಥಳಕ್ಕೆ ಸುಮಾರು 50ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದವು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.