ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ ಮನೆ: 4 ಲಕ್ಷಕ್ಕೂ ಹೆಚ್ಚು ಹಾನಿ - short circuit
🎬 Watch Now: Feature Video
ಕಾರವಾರ: ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿ ಮನೆ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಕುಮಟಾ ತಾಲೂಕಿನ ದೀವಿಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನವಗ್ರಾಮದಲ್ಲಿ ನಡೆದಿದೆ. ಗಜಾನನ ಅಂಬಿಗ ಎಂಬುವರಿಗೆ ಸೇರಿದ ಮನೆ ಇದಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಇಡಿ ಮನೆಗೆ ವ್ಯಾಪಿಸಿದೆ. ಕೂಡಲೇ ಅಗ್ನಿಶಾಮಕ ದಳ ಹಾಗು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಬಳಿಕ ಬೆಂಕಿ ನಂದಿಸಲಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಟಿವಿ, ಹಣ, ಬಂಗಾರ ಸೇರಿದಂತೆ ಅಂದಾಜು ನಾಲ್ಕು ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ. ಈ ಕುರಿತು ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.