ಸಿದ್ದರಾಮಯ್ಯರ 75ನೇ ಹುಟ್ಟುಹಬ್ಬ.. ಬೈಕ್ ರ‍್ಯಾಲಿಗೆ ಎಸ್ ಎಸ್ ಮಲ್ಲಿಕಾರ್ಜುನ್ ಚಾಲನೆ - ದಾವಣಗೆರೆಯಲ್ಲಿನ ಅಮೃತಮಹೋತ್ಸವಕ್ಕೆ ಸಕಲ ಸಿದ್ಧತೆ
🎬 Watch Now: Feature Video
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75 ನೇ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿರುವ ಅಮೃತ ಮಹೋತ್ಸವಕ್ಕೆ ಈಗಾಗಲೇ ಸಕಲ ಸಿದ್ಧತೆ ನಡೆದಿದೆ. ನಾಡಿದ್ದು ಶಾಮನೂರು ಅರಮನೆ ಮೈದಾನದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಐದರಿಂದ ಹತ್ತು ಲಕ್ಷ ಜನ ಸೇರುವ ಸಾಧ್ಯತೆಯಿದೆ. ಪ್ರಚಾರವಾಗಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಬೈಕ್ ರ‍್ಯಾಲಿ ನಡೆಸಿದರು. ನಗರದ ಆನೆಕೊಂಡದ ಬಸವೇಶ್ವರ ದೇವಸ್ಥಾನದ ಆವರಣದಿಂದ ಆರಂಭವಾದ ಕಾಂಗ್ರೆಸ್ ಬೈಕ್ ರ‍್ಯಾಲಿಗೆ ಮಾಜಿ ಸಚಿವ ಎಸ್. ಎಸ್ ಮಲ್ಲಿಕಾರ್ಜುನ್ ಚಾಲನೆ ನೀಡಿದರು.