ಮೂಲೆಗೆ ಸೇರಿದ ಶ್ರದ್ಧಾಂಜಲಿ ವಾಹನ: ಹಾವೇರಿ ಜಿಲ್ಲಾಸ್ಪತ್ರೆ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ
🎬 Watch Now: Feature Video
ಹಾವೇರಿ: ಸರ್ಕಾರಿ ಆಸ್ಪತ್ರೆಗಳಲ್ಲಿ ನಿಧನರಾದರೆ ಕುಟುಂಬಸ್ಥರು ಶವ ಒಯ್ಯಲು ಸರ್ಕಾರ ಉಚಿತ ವಾಹನದ ವ್ಯವಸ್ಥೆ ಕಲ್ಪಿಸಿತ್ತು. ಅದಕ್ಕಾಗಿ ರಾಜ್ಯದಲ್ಲಿನ ಪ್ರತಿ ಜಿಲ್ಲಾಸ್ಪತ್ರೆಗೆ ಶ್ರದ್ಧಾಂಜಲಿ ವಾಹನ ನೀಡಿತ್ತು. ಆದರೆ ಹಾವೇರಿ ಜಿಲ್ಲಾಸ್ಪತ್ರೆಗೆ ನೀಡಿದ್ದ ಶ್ರದ್ಧಾಂಜಲಿ ವಾಹನ ಕೆಟ್ಟು ನಿಂತು ತಿಂಗಳುಗಳೇ ಕಳೆದಿವೆ. ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಾಹನ ಓಡಾಡಲು ಯೋಗ್ಯವಿಲ್ಲ ಎಂದು ಪ್ರಮಾಣಪತ್ರ ನೀಡಿದ್ದಾರೆ. ಇದರಿಂದ ಜಿಲ್ಲಾಸ್ಪತ್ರೆಯಿಂದ ಶವ ತೆಗೆದುಕೊಂಡು ಹೋಗಲು ಸಾವಿರಾರು ರೂಪಾಯಿ ಖರ್ಚು ಮಾಡುವ ಸ್ಥಿತಿ ನಿರ್ಮಾಣವಾಗಿದೆ.