ಹಂಪಿಗೆ ಭೇಟಿ ನೀಡಿದ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ - Rithuraj avasthi visited hampi
🎬 Watch Now: Feature Video
ವಿಜಯನಗರ: ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ಭಾನುವಾರ ಸಂಜೆ ಕುಟುಂಬ ಸಮೇತ ಹಂಪಿಗೆ ಭೇಟಿ ನೀಡಿದ್ದರು. ಇಲ್ಲಿನ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ಬಳಿಕ ವಿಜಯ ವಿಠಲ ದೇವಸ್ಥಾನ, ಉಗ್ರ ನರಸಿಂಹ, ಕಮಲ ಮಹಲ್, ಮಹಾನವಮಿ ದಿಬ್ಬ ಸ್ಮಾರಕಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತರಾದ ಸಿದ್ದರಾಮೇಶ್ವರ, ವಿರೂಪಾಕ್ಷ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ರಾವ್, ಎಎಸ್‌ಐ ಕರಿಯಪ್ಪ ಮತ್ತಿತರರು ಉಪಸ್ಥಿತರಿದ್ದರು. ಶನಿವಾರ ಅಂಜನಾದ್ರಿಗೆ ಭೇಟಿ ನೀಡಿ ದೇವರದರ್ಶನ ಪಡೆದಿದ್ದರು.