thumbnail

By

Published : Jul 18, 2022, 12:55 PM IST

ETV Bharat / Videos

ಧಾರವಾಡ: ಗಾಳಿಸಹಿತ ಮಳೆಗೆ ಧರೆಗುರುಳಿದ ಬೃಹತ್​​ ಮರ- ವಿಡಿಯೋ

ಧಾರವಾಡ: ನಗರದಲ್ಲಿ ವರುಣಾರ್ಭಟ ಮುಂದುವರೆದಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಇಲ್ಲಿನ ಸಿಬಿಟಿ ಬಸ್ ನಿಲ್ದಾಣದ ಸಮೀಪ ಬೃಹತ್‌ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಮರ ಏಕಾಏಕಿ ಬಿದ್ದ ತಕ್ಷಣ ಮರದ ಬುಡದಲ್ಲಿ ಹಲವರು ಸಿಲುಕಿಕೊಂಡಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರ ಬೀಳುವ ದೃಶ್ಯ ಸಮೀಪದ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.