ಕೊಪ್ಪಳದಲ್ಲಿ ತೋಟಗಾರಿಕಾ ಇಲಾಖೆಯಿಂದ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ - ತೋಟಗಾರಿಕಾ ಇಲಾಖೆಯ ಫಾರ್ಮ್ ನಲ್ಲಿ ಬೆಳೆದ ಕರಬೂಜ
🎬 Watch Now: Feature Video
ನಗರದ ತೋಟಗಾರಿಕಾ ಇಲಾಖೆ ಕಚೇರಿ ಆವರಣದಲ್ಲಿ ಆಯೋಜಿಸಲಾಗಿರುವ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಉದ್ಘಾಟಿಸಿದರು. ಕಲ್ಲಂಗಡಿ, ಕರಬೂಜ, ದ್ರಾಕ್ಷಿ ಹಾಗೂ ದಾಳಿಂಬೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ ನೀಡಿ, ಮೇಳದಲ್ಲಿ ಪ್ರದರ್ಶನ ಹಾಗೂ ಮಾರಾಟಕ್ಕಿಟ್ಟಿರುವ ಹಣ್ಣುಗಳ ತಳಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೆ ತೋಟಗಾರಿಕಾ ಇಲಾಖೆಯ ಫಾರ್ಮ್ನಲ್ಲಿ ಬೆಳೆದ ಕರಬೂಜ, ಕಲ್ಲಂಗಡಿ ಹಣ್ಣಿನ ರುಚಿ ನೋಡಿದರು. ನಾಳೆ ನಡೆಯುವ ಕಾರ್ಯಾಗಾರದ ಕೈಪಿಡಿಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.